Breaking News

ಗಂಡನನ್ನು ಕೊಲೆ ಮಾಡಿ ಹೃದಯಾಘಾತ ಎಂದು ಕಥೆ ಕಟ್ಟಿದ್ದ ಹೆಂಡತಿ!

ಮೈಸೂರಿನಲ್ಲಿ ವ್ಯಕ್ತಿಯೊಬ್ಬರ ಸಾವನ್ನು ಹೃದಯಾಘಾತ ಎಂದು ಬಿಂಬಿಸಲು ಯತ್ನಿಸಿದ್ದ ಪ್ರಕರಣ ಕೊಲೆ ಎಂಬುದು ಬೆಳಕಿಗೆ ಬಂದಿದೆ. ಮೃತ ನಿತ್ಯಾನಂದ ಅವರ ಕುತ್ತಿಗೆಯಲ್ಲಿ ಗಾಯದ ಗುರುತು ಕಂಡು ಅನುಮಾನಗೊಂಡ ಅವರ ಸಹೋದರ ಪೊಲೀಸರಿಗೆ ದೂರು ನೀಡಿದ ಬಳಿಕ ಸತ್ಯ ಬಹಿರಂಗವಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಪತ್ನಿ ಸುಶೀಲ ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ಮಕ್ಕಳಿಲ್ಲದಿರುವುದು, ಕೌಟುಂಬಿಕ ಕಲಹ ಹಾಗೂ ಹಣಕಾಸು-ಆಸ್ತಿ ವಿಚಾರಕ್ಕೆ ಆಗಾಗ ಜಗಳವಾಗುತ್ತಿತ್ತು. ಮದ್ಯದ ಅಮಲಿನಲ್ಲಿ ಮಲಗಿದ್ದ ವೇಳೆ ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ. ಬೆಳಿಗ್ಗೆ ನಿತ್ಯಾನಂದ ಸ್ನೇಹಿತ ಕರೆ ಮಾಡಿದರೂ ಪ್ರತಿಕ್ರಿಯೆ ಸಿಗದ ಹಿನ್ನೆಲೆಯಲ್ಲಿ ಮನೆಗೆ ಬಂದಿದ್ದು, ಬಳಿಕ ಸುಶೀಲ ನಿತ್ಯಾನಂದ ಅವರ ಸಹೋದರರಿಗೆ ಹೃದಯಾಘಾತವಾಗಿದೆ ಎಂದು ತಿಳಿಸಿದ್ದರು. ಆದರೆ ದೂರು ಆಧರಿಸಿ ತನಿಖೆ ನಡೆಸಿದ ಪೊಲೀಸರು ಪ್ರಕರಣವನ್ನು ಭೇದಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *