Breaking News

ಕರ್ನಾಟಕ ಪೊಲೀಸ್ ಇಲಾಖೆಗೇ ಕಪ್ಪುಚುಕ್ಕೆ: ಅಪ್ರಾಪ್ತರ ಮೇಲೆ ವಿಕೃತಿ ಮೆರೆದ ಅಮೃತಹಳ್ಳಿ ಪಿಎಸ್‌ಐ ಪ್ರವೀಣ್ ಬಂಧನ!

ಬೆಂಗಳೂರು ಅಮೃತಹಳ್ಳಿ ಠಾಣೆಯ ಪಿಎಸ್‌ಐ ಪ್ರವೀಣ್ ವಿರುದ್ಧ ಅಪ್ರಾಪ್ತ ಬಾಲಕರ ಮೇಲೆ ದೌರ್ಜನ್ಯ ಎಸಗಿದ ಗಂಭೀರ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಪ್ರಕರಣದ ವಿಚಾರಣೆ ನೆಪದಲ್ಲಿ ಬಾಲಕರನ್ನು ಖಾಸಗಿ ಸ್ಥಳಕ್ಕೆ ಕರೆದೊಯ್ದು ಹಲ್ಲೆ ನಡೆಸಿರುವ ಆರೋಪವಿದೆ. ವಿಚಾರಣೆ ವೇಳೆ ಅಸಭ್ಯ ಹಾಗೂ ಅಮಾನವೀಯ ಕೃತ್ಯ ಎಸಗಿರುವುದಲ್ಲದೆ, ಅದರ ವಿಡಿಯೋವನ್ನು ಸ್ವತಃ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾನೆ ಎನ್ನಲಾಗಿದೆ. ಈ ವಿಡಿಯೋ ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಹಿರಿಯ ಅಧಿಕಾರಿಗಳು, ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಪಿಎಸ್‌ಐ ಪ್ರವೀಣ್‌ನನ್ನು ಬಂಧಿಸಿ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *