Breaking News

ವಿವಾಹಿತೆಯೊಂದಿಗೆ ಪರಾರಿ, ಯುವಕನ ಮನೆ ಧ್ವಂಸ – ಕುರಿಗಳನ್ನೂ ಬಿಡದ ಕಿರಾತಕರು!

ಬೆಳಗಾವಿ: ವಿವಾಹಿತ ಮಹಿಳೆಯೊಂದಿಗೆ ಯುವಕ ಪರಾರಿಯಾಗಿದ್ದಾನೆ ಎಂಬ ಆರೋಪದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಗುಂಪೊಂದು ಬೆಳಗಾವಿ ತಾಲೂಕಿನ ಭರಮ್ಯಾನಟ್ಟಿ ಗ್ರಾಮದಲ್ಲಿ ಯುವಕನ ಮನೆ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿದೆ. ಮನೆಯಲ್ಲಿದ್ದವರ ಮೇಲೆ ಹಲ್ಲೆ ನಡೆಸಿ, ಪೀಠೋಪಕರಣಗಳನ್ನು ಪುಡಿಗೈದಿರುವ ಆರೋಪ ಕೇಳಿಬಂದಿದೆ. ದಾಳಿಕೋರರು ಮನೆಯ ಪಕ್ಕದಲ್ಲಿದ್ದ ಕುರಿಗಳನ್ನು ಕದ್ದು ತೆಗೆದುಕೊಂಡು ಹೋಗಿ ಪಾರ್ಟಿ ಮಾಡಿರುವುದಾಗಿ ಸಂತ್ರಸ್ತ ಕುಟುಂಬ ಆರೋಪಿಸಿದೆ. ಯುವಕ ಕಳೆದ ಎರಡು ವರ್ಷಗಳಿಂದ ಮನೆಗೆ ಬಂದಿರಲಿಲ್ಲ ಹಾಗೂ ಈ ಸಂಬಂಧದ ಬಗ್ಗೆ ನಮಗೆ ಮಾಹಿತಿ ಇರಲಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಪ್ರಕರಣ ಸಂಬಂಧ ಹಲವರ ವಿರುದ್ಧ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ತಿಳಿಸಿದ್ದಾರೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *