Breaking News

ಆಸ್ತಿ ವಿಚಾರಕ್ಕೆ ಕಿರಿಕ್ – ತಮ್ಮನನ್ನೇ ಹತ್ಯೆಗೈದ ಅಣ್ಣಯ್ಯ!

ಬೆಳಗಾವಿ: ಜಮೀನು ಮಾರಾಟದ ವಿಚಾರವಾಗಿ ಉಂಟಾದ ಜಗಳ ವಿಕೋಪಕ್ಕೆ ತಿರುಗಿ ಅಣ್ಣನೇ ಸ್ವಂತ ತಮ್ಮನನ್ನು ಕಲ್ಲಿನಿಂದ ಜಜ್ಜಿ, ಕುತ್ತಿಗೆ ಹಿಸುಕಿ ಕೊಲೆ ಮಾಡಿದ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ರಾಜು ರುದ್ರಪ್ಪಗೋಳ (45) ಎಂದು ಗುರುತಿಸಲಾಗಿದ್ದು, ಕೊಲೆ ಆರೋಪದಡಿ ಅಣ್ಣ ಸಂಜು ರುದ್ರಪ್ಪಗೋಳ (49) ವಿರುದ್ಧ ಪ್ರಕರಣ ದಾಖಲಾಗಿದೆ. ಮೂರು ಎಕರೆ ಜಮೀನು ಮಾರಾಟದ ವಿಚಾರವೇ ಕೊಲೆಗೆ ಕಾರಣ ಎನ್ನಲಾಗಿದೆ. ಪ್ರಕರಣ ಸಂಬಂಧ ತನಿಖೆ ಮುಂದುವರಿದಿದ್ದು, ಆರಂಭದಲ್ಲಿ ಎರಡೂ ಕುಟುಂಬಗಳಿಂದ ಯಾವುದೇ ದೂರು ದಾಖಲಾಗಿರಲಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ತಿಳಿಸಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *