Breaking News

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ: ಆಪರೇಷನ್ ಥಿಯೇಟರ್ ನಲ್ಲಿ ಬೆಂಕಿ

ದಾವಣಗೆರೆಯ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡು ಆಪರೇಷನ್ ಥಿಯೇಟರ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಸ್ಫೋಟದ ಬಳಿಕ ದಟ್ಟ ಹೊಗೆ ಆವರಿಸಿಕೊಂಡು ಆಸ್ಪತ್ರೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಬೆಂಕಿಯಿಂದ ಆಪರೇಷನ್ ಥಿಯೇಟರ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವ ಕಾರ್ಯಾಚರಣೆ ನಡೆಸಿದರು. ಘಟನೆಯ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆಂಕಿ ಅವಘಡಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಆರಂಭಿಸಲಾಗಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *