Breaking News

ಪಕ್ಕದ ಮನೆ ಯುವತಿಯೊಡನೆ ಅಫೇರ್ – ಪ್ರಶ್ನಿಸಿದ್ದಕ್ಕೆ ಪತ್ನಿಯ ಕಗ್ಗೊಲೆ!

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಹೊನ್ನಿಕೇರಿ ಗ್ರಾಮದ 26 ವರ್ಷದ ಸಂಜನಾ ಅವರನ್ನು ಪತಿ ಭಗವತ್ ಜ್ಞಾನೇಶ್ವರ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಅನೈತಿಕ ಸಂಬಂಧ ಪ್ರಶ್ನಿಸಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಪತ್ನಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಸಂಜನಾ ಅವರನ್ನು ಸೊಲ್ಲಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜನಾ ಮೃತಪಟ್ಟಿದ್ದಾರೆ. ಈ ಸಂಬಂಧ ಧನ್ನೂರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *