ಬೆಂಗಳೂರು ವಿಧಾನಸೌಧದ ಎದುರು ಫುಟ್‌ಪಾತ್‌ನಲ್ಲಿ ಎರಡು ಗುಂಪುಗಳ ನಡುವೆ ನಡೆದ ಜಗಳ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಮೊಬೈಲ್‌ನಲ್ಲಿ ಫೋಟೋ ತೆಗೆಯುವ ವಿಚಾರಕ್ಕೆ ಆರಂಭವಾದ ವಾಗ್ವಾದ ಹೊಡೆದಾಟಕ್ಕೆ ತಿರುಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ವಿಧಾನಸೌಧದಂತಹ ಭದ್ರತಾ ವಲಯದಲ್ಲೇ ಈ ಘಟನೆ ನಡೆದಿರುವುದು ಗಮನ ಸೆಳೆದಿದೆ. ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ನಡೆಸಿದ ಆರೋಪದಡಿ ನಾಲ್ವರನ್ನು ಬಂಧಿಸಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

