Breaking News

ಶಿವಮೊಗ್ಗ: ಯೂನಿಯನ್ ಬ್ಯಾಂಕ್‌ನಲ್ಲಿ ಅಗ್ನಿ ಅವಘಡ; ಕಂಪ್ಯೂಟರ್, ದಾಖಲೆಗಳು ಭಸ್ಮ!

ಶಿವಮೊಗ್ಗ: ನಗರದ ಹೃದಯಭಾಗವಾದ ಬಿ.ಹೆಚ್. ರಸ್ತೆಯಲ್ಲಿರುವ ಯೂನಿಯನ್ ಬ್ಯಾಂಕ್ ಶಾಖೆಯಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಜ್ವಾಲೆಗೆ ಬ್ಯಾಂಕ್‌ನಲ್ಲಿದ್ದ ಕಂಪ್ಯೂಟರ್‌ಗಳು, ಪೀಠೋಪಕರಣಗಳು ಹಾಗೂ ಪ್ರಮುಖ ದಾಖಲೆಗಳು ಸುಟ್ಟು ಕರಕಲಾಗಿವೆ. ಮುಂಜಾನೆ ಬ್ಯಾಂಕ್ ಸಿಬ್ಬಂದಿ ಕಚೇರಿ ಬಾಗಿಲು ತೆರೆದಾಗ ಈ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ತಡರಾತ್ರಿ ಯಾರೂ ಇಲ್ಲದ ಸಮಯದಲ್ಲಿ ಈ ದುರಂತ ಸಂಭವಿಸಿರುವುದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪ್ರಾಥಮಿಕ ತನಿಖೆಯ ಪ್ರಕಾರ, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಈ ಅಗ್ನಿ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು ತಕ್ಷಣವೇ ಬ್ಯಾಂಕ್‌ಗೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *