ಚಿಕ್ಕಬಳ್ಳಾಪುರ: ಮುದ್ದೇನಹಳ್ಳಿ ಸಮೀಪದ ಹೋಂಸ್ಟೇಯೊಂದರಲ್ಲಿ ಬೆಂಗಳೂರು ಮೂಲದ ಸಾಯಿ ಸುರಭಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಆಕೆಯ ಪ್ರಿಯಕರ ಎನ್ನಲಾದ ಕೇರಳ ಮೂಲದ ಸಂಜೀತ್ ಅಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಸ್ಥಳದಲ್ಲಿ ಮಾತ್ರೆಗಳು ಹಾಗೂ ಡೈರಿ ಪತ್ತೆಯಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತೆಯ ತಾಯಿ ಗೀತಾ ಅವರು ಇದು ಕೊಲೆ ಎಂದು ಆರೋಪಿಸಿ, ಈ ಹಿಂದೆ ನೀಡಿದ್ದ ದೂರಿನ ಮೇಲೆ ಕ್ರಮ ಕೈಗೊಂಡಿದ್ದರೆ ಮಗಳು ಬದುಕಿರುತ್ತಿದ್ದಳು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಪೊಲೀಸರು ಕೊಲೆಯೋ, ಆತ್ಮಹತ್ಯೆಯೋ ಅಥವಾ ಇಬ್ಬರೂ ಆತ್ಮಹತ್ಯೆಗೆ ಯತ್ನಿಸಿದ್ದರೋ ಎಂಬ ಎಲ್ಲಾ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

