ಹಾವೇರಿ: ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ವೇಳೆ ನಡೆದ ಗಲಾಟೆ ಹಿಂಸಾಚಾರಕ್ಕೆ ತಿರುಗಿ, ದುಷ್ಕರ್ಮಿಗಳ ದಾಳಿಯಲ್ಲಿ ಇಬ್ಬರು ರೈತರ ಕೈ ಕಡಿಯಲ್ಪಟ್ಟಿದ್ದು, ಎಂಟಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಸೀದಿ ಮುಂಭಾಗದಲ್ಲಿ ಪಟಾಕಿ ಸಿಡಿಸಿದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ವಾಗ್ವಾದ ಆರಂಭವಾಗಿ, ಬಳಿಕ ಮಾರಕಾಸ್ತ್ರಗಳಿಂದ ದಾಳಿ ನಡೆದಿರುವುದಾಗಿ ಪ್ರಾಥಮಿಕ ಮಾಹಿತಿ ತಿಳಿಸಿದೆ. ಘಟನೆಯಿಂದ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ದಾಳಿಕೋರರ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

