Breaking News

ಬೆಂಗಳೂರಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ: ಹೊತ್ತಿ ಉರಿದ ಅಪಾರ್ಟ್‌ಮೆಂಟ್‌!

ಬೆಂಗಳೂರು: ರಾಜಧಾನಿಯ ಹೃದಯಭಾಗದಲ್ಲಿರುವ ಅಶೋಕನಗರದ ಅಪಾರ್ಟ್‌ಮೆಂಟ್ ಫ್ಲ್ಯಾಟ್‌ ಒಂದರಲ್ಲಿ ಮಂಗಳವಾರ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಇಲ್ಲಿನ ಪ್ರಸಿದ್ಧ ಗರುಡಾ ಮಾಲ್ ಸಮೀಪದಲ್ಲೇ ಇರುವ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ಕೆಲಕಾಲ ಭೀತಿ ಆವರಿಸಿತ್ತು. ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ ಒಂದರಿಂದ ಏಕಾಏಕಿ ದಟ್ಟವಾದ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್, ಬೆಂಕಿ ವ್ಯಾಪಿಸುತ್ತಿದ್ದಂತೆ ಮುನ್ನೆಚ್ಚರಿಕೆ ವಹಿಸಿ ನಿವಾಸಿಗಳು ತಕ್ಷಣವೇ ಹೊರಗೆ ಓಡಿ ಬಂದಿದ್ದಾರೆ. ಹೀಗಾಗಿ ಯಾವುದೇ ರೀತಿಯ ಪ್ರಾಣಾಪಾಯ ಅಥವಾ ಗಾಯಗಳಾದ ಬಗ್ಗೆ ವರದಿಯಾಗಿಲ್ಲ. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯಕ್ಕೆ ಅಪಾರ್ಟ್‌ಮೆಂಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಅಥವಾ ಇನ್ಯಾವ ಕಾರಣದಿಂದ ಬೆಂಕಿ ಹೊತ್ತಿಕೊಂಡಿದೆ ಎಂಬ ನಿಖರ ಮಾಹಿತಿ ಲಭ್ಯವಾಗಿಲ್ಲ. ಈ ಘಟನೆಗೆ ಸಂಬಂಧಿಸಿದಂತೆ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮತ್ತು ಇಂಜಿನಿಯರ್‌ಗಳ ತಂಡ ತನಿಖೆ ಕೈಗೊಂಡಿದೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *