Breaking News

ಮಲೆನಾಡು & ಕರಾವಳಿ ಕಾಡುಗಳಲ್ಲಿ ಬಾಂಬ್ ತಯಾರಿಕೆ? ಪೊಲೀಸರಿಗೆ ಮಹತ್ತರ ಸುಳಿವು!

ತುಮಕೂರು ಕಾರು ಸ್ಫೋಟ ಪ್ರಕರಣದ ತನಿಖೆ ವೇಳೆ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಅಕ್ರಮ ಬಾಂಬ್ ಹಾಗೂ ಬಂದೂಕು ತಯಾರಿಕಾ ಜಾಲ ಸಕ್ರಿಯವಾಗಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಈ ಸಂಬಂಧ ಉತ್ತರ ಕನ್ನಡ ಜಿಲ್ಲೆಯಲ್ಲಿ 60ಕ್ಕೂ ಹೆಚ್ಚು ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಮುಖ್ಯ ಆರೋಪಿ ನಾಗೇಂದ್ರಗೌಡನಿಗೆ ನೆರವು ನೀಡಿದ ಆರೋಪದಲ್ಲಿ ಅಂಕೋಲಾ ಮತ್ತು ಹೊನ್ನಾವರ ಮೂಲದ ಮೂವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಜಾಲದ ಮೂಲ ಪತ್ತೆಗೆ ಮೂರು ವಿಶೇಷ ಪೊಲೀಸ್ ತಂಡಗಳು ಶೋಧ ಕಾರ್ಯ ಮುಂದುವರಿಸಿವೆ. ಪ್ರಾಥಮಿಕ ತನಿಖೆಯ ಪ್ರಕಾರ, ಅಕ್ರಮ ಸ್ಫೋಟಕಗಳನ್ನು ಮುಖ್ಯವಾಗಿ ಕಾಡು ಪ್ರಾಣಿಗಳ ಬೇಟೆ ಹಾಗೂ ಮೀನುಗಾರಿಕೆಗೆ ಬಳಸಲಾಗುತ್ತಿತ್ತು. ಪ್ರಕರಣದ ಎಲ್ಲ ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಬೆಳಗಾವಿಯಲ್ಲಿ ‘ಕರ್ನಾಟಕ ಬಂದ್’ಗೆ ಅಭೂತಪೂರ್ವ ಬೆಂಬಲ : ಧಾರವಾಡದಲ್ಲಿ ನಿಷೇಧಾಜ್ಞೆ ಜಾರಿ

ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ …

Leave a Reply

Your email address will not be published. Required fields are marked *