ಬೆಂಗಳೂರು: ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 10 ಮಹಿಳೆಯರನ್ನು ರಕ್ಷಿಸಿ ಎಫ್‌ಆರ್‌ಆರ್‌ಒ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಬಾಣಸವಾಡಿ ಹಾಗೂ ಹೆಣ್ಣೂರು ವ್ಯಾಪ್ತಿಯಲ್ಲಿ ನಡೆದ ದಾಳಿಯಲ್ಲಿ ಆರೋಪಿಗಳಿಂದ ಬಾಂಗ್ಲಾದೇಶದ ಗುರುತಿನ ದಾಖಲೆಗಳು ಪತ್ತೆಯಾಗಿವೆ. ಮಧ್ಯವರ್ತಿಗಳ ಮೂಲಕ ಮಹಿಳೆಯರನ್ನು ಕರೆತಂದು ಜಾಲತಾಣಗಳ ಮೂಲಕ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

