ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹಣಸಿ ಗ್ರಾಮದಲ್ಲಿ ಪತ್ನಿ ದಪ್ಪಗಿದ್ದಾಳೆ ಹಾಗೂ ಗರ್ಭಿಣಿಯಾಗಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಪತಿಯೊಬ್ಬ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಎರಡು ದಿನಗಳ ಹಿಂದೆ ನಡೆದಿದ್ದ ಘಟನೆ ಇದೀಗ ಬೆಳಕಿಗೆ ಬಂದಿದೆ. 29 ವರ್ಷದ ಪ್ರಿಯಾಂಕಾ ಕಮಲಾಕರ್ ಮೃತಪಟ್ಟ ಮಹಿಳೆ. 2024ರಲ್ಲಿ ಬಸವರಾಜ್ ವಡ್ಡರ್ ಮತ್ತು ಪ್ರಿಯಾಂಕಾ ವಿವಾಹವಾಗಿದ್ದರು. ಮದುವೆಯ ಬಳಿಕ ಪತ್ನಿಯ ದೇಹದ ತೂಕದ ಬಗ್ಗೆ ನಿರಂತರವಾಗಿ ಅವಮಾನಿಸಿ, ಮಕ್ಕಳಾಗುವುದಿಲ್ಲ ಎಂದು ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದನೆಂದು ಆರೋಪಿಸಲಾಗಿದೆ. ಇದೇ ವಿಚಾರವಾಗಿ ನಡೆದ ಜಗಳದ ವೇಳೆ ಬಸವರಾಜ್ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಳ ಪೋಷಕರು ನೀಡಿದ ದೂರಿನ ಮೇರೆಗೆ ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತಿ ಬಸವರಾಜ್ ಸೇರಿದಂತೆ ರೇಣವ್ವ, ಸುಭಾಷ್ ಹಾಗೂ ಸಿದ್ದರಾಮೇಶ್ ಎಂಬ ನಾಲ್ವರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

