Breaking News

ನಾಡಬಾಂಬ್‌ ಸ್ಫೋಟ ಪ್ರಕರಣ: ಬಾಂಬ್ ಪೂರೈಕೆ ಮಾಡಿದ್ದ ಆರೋಪದ ಮೇಲೆ ಮೂವರು ಅರೆಸ್ಟ್‌

ಅಂಕೋಲಾದ ಯುವಕ ಕಾರಿನಲ್ಲಿ ನಾಡಬಾಂಬ್ ಸ್ಫೋಟಗೊಂಡು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಕೋಲಾ ಪೊಲೀಸರು ನಾಡಬಾಂಬ್ ಹೊಂದಿದ್ದ ಹಾಗೂ ಪೂರೈಸಿದ ಆರೋಪದ ಮೇಲೆ ಮೂವರು ಸ್ಥಳೀಯರನ್ನು ಬಂಧಿಸಿದ್ದಾರೆ. ಆರೋಪಿತರು ಅರಣ್ಯ ಪ್ರದೇಶದಲ್ಲಿ ಬಚ್ಚಿಟ್ಟಿದ್ದ ಮೂರು ಸಜೀವ ನಾಡಬಾಂಬ್‌ಗಳನ್ನು ಪೊಲೀಸರು ಪತ್ತೆಹಚ್ಚಿದ್ದು, ಬಾಂಬ್ ನಿಷ್ಕ್ರಿಯ ದಳ ಅವುಗಳನ್ನು ಸುರಕ್ಷಿತವಾಗಿ ವಶಕ್ಕೆ ಪಡೆದುಕೊಂಡಿದೆ. ಪ್ರಕರಣದ ತನಿಖೆ ತೀವ್ರಗೊಂಡಿದ್ದು, ನಾಡಬಾಂಬ್ ಬಳಕೆ ಹಾಗೂ ಮೃತನ ಉದ್ದೇಶ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *