Breaking News

ಹುಬ್ಬಳ್ಳಿಗೆ ಭಯಾನಕ ಬೈಕ್ ಕಳ್ಳರ ಗ್ಯಾಂಗ್ ಎಂಟ್ರಿ: ಆತಂಕ ಸೃಷ್ಟಿಸಿದ ಮುಸುಕುಧಾರಿಗಳು

ಹುಬ್ಬಳ್ಳಿಗೆ ಬೈಕ್ ಕಳ್ಳರ ಭಯಾನಕ ಗ್ಯಾಂಗ್ ಎಂಟ್ರಿ..! ಮುಸುಕುಧಾರಿಗಳ ಅಟ್ಟಹಾಸಕ್ಕೆ ಜನ ಬೆಚ್ಚಿಬಿದ್ದರು..


ರಾತ್ರೋರಾತ್ರಿ ಹುಬ್ಬಳ್ಳಿಯಲ್ಲಿ ಬೈಕ್ ಕಳ್ಳರ ದಾಳಿ..! ಆತಂಕ ಸೃಷ್ಟಿಸಿದ ಮುಸುಕುಧಾರಿಗಳ ಗ್ಯಾಂಗ್

ಹುಬ್ಬಳ್ಳಿ: ನಗರದಲ್ಲಿ ಮತ್ತೆ ಬೈಕ್ ಕಳ್ಳರ ಗ್ಯಾಂಗ್ ಸಕ್ರಿಯವಾಗಿರುವ ಶಂಕೆ ವ್ಯಕ್ತವಾಗಿದ್ದು, ತಡರಾತ್ರಿ ಮನೆಗಳ ಮುಂದೆ ನಿಲ್ಲಿಸಿದ್ದ ಬೈಕ್‌ಗಳನ್ನು ಕಳವು ಮಾಡುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆಗಳು ಹೆಚ್ಚಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ವಿಶೇಷ ತಂಡ ರಚಿಸಿ ಬೈಕ್ ಕಳ್ಳರ ಜಾಲವನ್ನು ಭೇದಿಸಲು ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇತ್ತೀಚಿನ ತಿಂಗಳುಗಳಲ್ಲಿ ಇದೇ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಹಾಗೂ ದರೋಡೆ ಯತ್ನದಂತಹ ಹಲವು ಪ್ರಕರಣಗಳು ವರದಿಯಾಗಿವೆ. ಮತ್ತೆ ಬೈಕ್ ಕಳ್ಳರ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನಿವಾಸಿಗಳಲ್ಲಿ ಆತಂಕ ಮನೆಮಾಡಿದೆ. ರಾತ್ರಿ ಗಸ್ತು ಹೆಚ್ಚಿಸಿ, ಸರಣಿ ಕಳ್ಳತನಗಳಿಗೆ ಕಡಿವಾಣ ಹಾಕುವಂತೆ ಸಾರ್ವಜನಿಕರು ಪೊಲೀಸರನ್ನು ಒತ್ತಾಯಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *