ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದೇವರಹಳ್ಳಿಯಲ್ಲಿ ನಾಡಪ್ರಭು ಕೆಂಪೇಗೌಡರ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ ಎಂಕೆ ದೊಡ್ಡಿ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಗ್ರಾಮದ ಡಿ.ಪಿ. ಶಶಾಂಕ್ (20) ಬಂಧಿತನಾಗಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ ಇನ್ನಿಬ್ಬರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.bಜೂನ್ 27ರಂದು ಕೆಂಪೇಗೌಡರ ಜಯಂತಿ ಅಂಗವಾಗಿ ಗ್ರಾಮದಲ್ಲಿ ಅಳವಡಿಸಿದ್ದ ಬೃಹತ್ ಫ್ಲೆಕ್ಸ್‌ಗೆ ಭಾನುವಾರ ಮಧ್ಯರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು. ಘಟನೆ ಬೆಳಕಿಗೆ ಬಂದ ತಕ್ಷಣ ಗ್ರಾಮಸ್ಥರು ಪ್ರತಿಭಟನೆ ನಡೆಸಿ, ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿದ್ದರು. ಪ್ರತಿಭಟನಾಕಾರರಿಗೆ ಡಿವೈಎಸ್ಪಿ ಕೆ.ಸಿ. ಗಿರಿ ಹಾಗೂ ಪೊಲೀಸ್ ಅಧಿಕಾರಿಗಳು ಮೂರು ದಿನಗಳೊಳಗೆ ಆರೋಪಿಗಳನ್ನು ಬಂಧಿಸುವ ಭರವಸೆ ನೀಡಿದ್ದರು. ಅದರಂತೆ 24 ಗಂಟೆಯೊಳಗೆ ಖಚಿತ ಮಾಹಿತಿ ಮೇರೆಗೆ ಶಶಾಂಕ್‌ನನ್ನು ಬಂಧಿಸಿದ್ದು, ಉಳಿದ ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

