ಪುಣೆಯ ರಿಯಲ್ ಎಸ್ಟೇಟ್ ಉದ್ಯಮಿ ಕೇತನ್ ವಿಶಾಲ್ ಅಗರವಾಲ್ ಕೊಲೆ ಪ್ರಕರಣದಲ್ಲಿ ಭಾವಿ ಪತ್ನಿ ಸಿಯಾ ಗೋಯಲ್ ಹಾಗೂ ಆಕೆಯ ಪ್ರಿಯಕರ ಚೇತನ್ ಚೌಧರಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೇತನ್ ಅವರ ಮೊಬೈಲ್ ಕೆಲಕಾಲ ಸಿಯಾ ಬಳಿಯೇ ಇದ್ದಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮೊಬೈಲ್‌ನಲ್ಲಿ ಇದ್ದ ಚಾಟ್‌ಗಳು, ಕರೆ ವಿವರಗಳು ಸೇರಿದಂತೆ ಯಾವುದೇ ಪ್ರಮುಖ ಸಾಕ್ಷ್ಯಗಳನ್ನು ಅಳಿಸಲಾಗಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ಆರೋಪಿಗಳ ಪೊಲೀಸ್ ಕಸ್ಟಡಿ ವಿಸ್ತರಣೆಗೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗಿದೆ. ಜೂನ್ 18ರಂದು ಲೋಹಾಗಢ ಕೋಟೆಗೆ ಚಾರಣದ ನೆಪದಲ್ಲಿ ಕರೆದೊಯ್ದು ಕೇತನ್ ಅವರನ್ನು ಕಣಿವೆಗೆ ತಳ್ಳಿ ಹತ್ಯೆ ಮಾಡಲಾಗಿತ್ತು. ಪ್ರಕರಣದ ತನಿಖೆಯ ಭಾಗವಾಗಿ ಪೊಲೀಸರು ಆರೋಪಿಗಳನ್ನು ಸ್ಥಳಕ್ಕೆ ಕರೆದೊಯ್ದು ಘಟನೆ ಮರುಸೃಷ್ಟಿ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

