ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಬಂಧಿತನಾಗಿರುವ ಶಂಕಿತ ಉಗ್ರ ಸೊಹೇಲ್‌ನನ್ನು ಪೊಲೀಸರು ವಿಚಾರಣೆ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪಾಕಿಸ್ತಾನದೊಂದಿಗೆ ನಂಟು ಹೊಂದಿದ್ದ ಆರೋಪದಡಿ ಆತನನ್ನು ಬಂಧಿಸಲಾಗಿತ್ತು. ಪೊಲೀಸರು ಹಾಗೂ ಎನ್‌ಐಎ ಅಧಿಕಾರಿಗಳು ಸೊಹೇಲ್‌ನನ್ನು ವಿಚಾರಣೆ ನಡೆಸಿದ್ದಾರೆ. ಆತನ ಮೊಬೈಲ್‌ನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಎಫ್‌ಎಸ್‌ಎಲ್ ವರದಿ ಬಂದ ಬಳಿಕ ಅಗತ್ಯವಿದ್ದರೆ ಆರೋಪಿಯನ್ನು ಮತ್ತೆ ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುವುದು ಎಂದು ಎಸ್‌ಪಿ ಎಚ್.ಟಿ. ಶೇಖರ್ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

