ಬೀದರ್‌ನಲ್ಲಿ ನಕಲಿ ದಾಖಲೆಗಳ ಮೂಲಕ ಗೊಂಡ ಜಾತಿ ಪ್ರಮಾಣ ಪತ್ರ ಪಡೆದು ವಂಚನೆ ಎಸಗಿದ್ದ ಪ್ರಕರಣದಲ್ಲಿ ಔರಾದ್ ತಾಲೂಕಿನ ರಕ್ಷಾಳ (ಬಿ) ಗ್ರಾಮದ ವಿದ್ದೇಶಗೊಂಡ ವಿಠಲಗೊಂಡ ಬಾಳೂರೆಗೆ ನ್ಯಾಯಾಲಯ ಮೂರು ವರ್ಷ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. ಕುರುಬ ಸಮುದಾಯದವರಾಗಿದ್ದರೂ ಎಸ್‌ಟಿ ಮೀಸಲಾತಿ ಪಡೆಯಲು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಗೊಂಡ ಜಾತಿ ಪ್ರಮಾಣ ಪತ್ರ ಪಡೆದಿರುವುದು ತನಿಖೆಯಲ್ಲಿ ಸಾಬೀತಾಗಿತ್ತು. ಬಳಿಕ ಜಿಲ್ಲಾಮಟ್ಟದ ಜಾತಿ ಪರಿಶೀಲನಾ ಸಮಿತಿಯು ಪ್ರಮಾಣ ಪತ್ರವನ್ನು ರದ್ದುಪಡಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ವಿವಿಧ ಕಲಂಗಳಡಿ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

