ಹುಬ್ಬಳ್ಳಿ: ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಿಟಕಿಯಿಂದ ತಲೆ ಹೊರಹಾಕಿದ್ದ 17 ವರ್ಷದ ಐಟಿಐ ವಿದ್ಯಾರ್ಥಿಯೊಬ್ಬ ಟಿಪ್ಪರ್ ಲಾರಿಗೆ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಕುಂದಗೋಳ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಮೃತನನ್ನು ಕುಂದಗೋಳ ತಾಲೂಕಿನ ಶಿರೂರು ಗ್ರಾಮದ ಪಕ್ಕಿರೇಶ್ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯಿಂದ ಲಕ್ಷ್ಮೇಶ್ವರಕ್ಕೆ ತೆರಳುತ್ತಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ನಲ್ಲಿ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಪಕ್ಕಿರೇಶ್, ಗುಟ್ಕಾ ಉಗುಳಲು ಕಿಟಕಿಯಿಂದ ತಲೆ ಹೊರಹಾಕಿದ್ದಾನೆ ಎನ್ನಲಾಗಿದೆ. ಇದೇ ವೇಳೆ ಹಿಂಬದಿಯಿಂದ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು, ತೀವ್ರ ಗಾಯಗಳಿಂದ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮಾಹಿತಿ ತಿಳಿದ ಕುಂದಗೋಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಟಿಪ್ಪರ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

