Breaking News

ದಾವಣಗೆರೆ| ಇಸ್ಪೀಟ್‌ ಜೂಜಾಟದ ಮೇಲೆ ದಾಳಿ; ₹ 10.63 ಲಕ್ಷ ನಗದು ವಶ

ದಾವಣಗೆರೆ: ಜಿಲ್ಲೆಯ ವಿವಿಧೆಡೆ ಇಸ್ಪೀಟ್ ಜೂಜಾಟದ ಅಡ್ಡೆಗಳ ಮೇಲೆ ಪೊಲೀಸರು ದಾಳಿ ನಡೆಸಿ ಒಟ್ಟು ₹10.63 ಲಕ್ಷಕ್ಕೂ ಅಧಿಕ ನಗದು ವಶಪಡಿಸಿಕೊಂಡಿದ್ದಾರೆ. ಪ್ರಮುಖವಾಗಿ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಲಾಡ್ಜ್‌ನಲ್ಲಿ ಜೂಜಾಟದಲ್ಲಿ ತೊಡಗಿದ್ದ 11 ಮಂದಿಯಿಂದ ₹10.50 ಲಕ್ಷ ವಶಕ್ಕೆ ಪಡೆಯಲಾಗಿದೆ. ಇದೇ ವೇಳೆ ಬಿಳಿಚೋಡು ಪೊಲೀಸ್ ಠಾಣೆ ವ್ಯಾಪ್ತಿಯ ಗುತ್ತಿದುರ್ಗ ಸಮೀಪ ಜೂಜಾಟ ನಡೆಸುತ್ತಿದ್ದ 8 ಮಂದಿಯಿಂದ ₹9,150 ಹಾಗೂ ಮಾಯಕೊಂಡ ಪೊಲೀಸ್ ಠಾಣೆ ವ್ಯಾಪ್ತಿಯ ನಲ್ಕುಂದ ಗ್ರಾಮದ ಸಾರ್ವಜನಿಕ ರಸ್ತೆಯಲ್ಲಿ ಜೂಜಾಟದಲ್ಲಿ ತೊಡಗಿದ್ದ 7 ಮಂದಿಯಿಂದ ₹4,600 ನಗದು ವಶಪಡಿಸಿಕೊಳ್ಳಲಾಗಿದೆ. ಮೂರು ಪ್ರತ್ಯೇಕ ಪ್ರಕರಣಗಳನ್ನು ಕ್ರಮವಾಗಿ ವಿದ್ಯಾನಗರ, ಬಿಳಿಚೋಡು ಮತ್ತು ಮಾಯಕೊಂಡ ಪೊಲೀಸ್ ಠಾಣೆಗಳಲ್ಲಿ ದಾಖಲಿಸಿಕೊಂಡಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *