Breaking News

ಗೃಹಿಣಿ ಕೊಲೆ ಪ್ರಕರಣ… ಪತಿ ಸೇರಿ ನಾಲ್ವರ ಬಂಧನ

ಧಾರವಾಡ: ನವಲಗುಂದ ತಾಲೂಕಿನ ಹಣಸಿ ಗ್ರಾಮದಲ್ಲಿ ಗೃಹಿಣಿ ಪ್ರಿಯಾಂಕಾ ಕಮಲಾಕರ (29) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಸೇರಿದಂತೆ ನಾಲ್ವರನ್ನು ನವಲಗುಂದ ಪೊಲೀಸರು ಬಂಧಿಸಿದ್ದಾರೆ. 2024ರಲ್ಲಿ ಬಸವರಾಜ ವಡ್ಡರ್ ಅವರನ್ನು ವಿವಾಹವಾಗಿದ್ದ ಪ್ರಿಯಾಂಕಾಗೆ ಮದುವೆಯಾದ ಬಳಿಕ ಪತಿ ಹಾಗೂ ಕುಟುಂಬಸ್ಥರು ವರದಕ್ಷಿಣೆ ವಿಚಾರವಾಗಿ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಸೋಮವಾರ ರಾತ್ರಿ ಕತ್ತು ಹಿಸುಕಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಬಸವರಾಜ, ರೇಣವ್ವ ವಡ್ಡರ್, ಸುಭಾಸ ವಡ್ಡರ್ ಹಾಗೂ ಸಿದ್ದರಾಮೇಶ್ವರ ವಡ್ಡರ್ ಅವರನ್ನು ಬಂಧಿಸಿದ್ದಾರೆ. ಘಟನೆ ನಡೆದ 24 ಗಂಟೆಯೊಳಗೆ ಆರೋಪಿಗಳನ್ನು ಪತ್ತೆಹಚ್ಚಿದ ಪೊಲೀಸ್ ತಂಡವನ್ನು ಎಸ್‌ಪಿ ಗುಂಜನ್ ಆರ್ಯ ಪ್ರಶಂಸಿಸಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *