Breaking News

ಶಿಶುಪಾಲನಾ ಕೇಂದ್ರದಲ್ಲಿ ಮಕ್ಕಳಿಗೆ ಚಿತ್ರಹಿಂಸೆ ಆರೋಪ; ಐವರು ಮಹಿಳಾ ಸಿಬ್ಬಂದಿ ವಿರುದ್ಧ ಎಫ್‌ಐಆರ್‌

ಬೆಂಗಳೂರು: ನಗರದ ಖಾಸಗಿ ಶಿಶುಪಾಲನಾ ಕೇಂದ್ರದಲ್ಲಿ ಎರಡು ವರ್ಷದ ಮಕ್ಕಳಿಗೆ ಸಿಬ್ಬಂದಿ ಚಿತ್ರಹಿಂಸೆ ನೀಡಿರುವ ಆರೋಪ ಕೇಳಿಬಂದಿದ್ದು, ಎಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ಐವರು ಮಹಿಳಾ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ವೈರಲ್ ಆದ ವಿಡಿಯೊಗಳ ಆಧಾರದಲ್ಲಿ ಮಕ್ಕಳ ಪೋಷಕರು ದೂರು ನೀಡಿದ್ದು, ಬಾಲಾಪರಾಧ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆಯ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ದೂರಿನ ಪ್ರಕಾರ, ಮಕ್ಕಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂರಿಸುವುದು, ಬಾತ್‌ರೂಮ್‌ನಲ್ಲಿ ಕೂಡಿ ಹಾಕುವುದು ಹಾಗೂ ದೈಹಿಕ ಹಿಂಸೆ ನೀಡಲಾಗಿದೆ ಎನ್ನಲಾಗಿದೆ. ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *