Breaking News

ದಾಂಪತ್ಯ ಕಲಹ ಪತ್ನಿಯಿಂದಲೇ ಪತಿಯ ಕೊಲೆ

ಮೈಸೂರು: ನಗರದ ಕುವೆಂಪುನಗರದಲ್ಲಿ ಪತಿ ನಿತ್ಯಾನಂದ (50) ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಪತ್ನಿ ಸುಶೀಲಾಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕುವೆಂಪುನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾನುವಾರ ರಾತ್ರಿ ಮದ್ಯ ಸೇವಿಸಿ ಮನೆಗೆ ಬಂದ ನಿತ್ಯಾನಂದ ಮತ್ತು ಸುಶೀಲಾ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಸೋಮವಾರ ಬೆಳಿಗ್ಗೆ ನಿತ್ಯಾನಂದ ಮೃತಪಟ್ಟಿರುವುದು ಬೆಳಕಿಗೆ ಬಂದಿದ್ದು, ಮೊದಲಿಗೆ ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂದು ತಿಳಿಸಲಾಗಿತ್ತು. ಆದರೆ ಮೃತದೇಹದ ಕುತ್ತಿಗೆಯಲ್ಲಿ ಬಿಗಿದ ಗುರುತು ಕಂಡುಬಂದ ಹಿನ್ನೆಲೆಯಲ್ಲಿ ಅನುಮಾನಗೊಂಡ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದರು. ಪ್ರಾಥಮಿಕ ತನಿಖೆಯಲ್ಲಿ ಕುತ್ತಿಗೆ ಬಿಗಿದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *