ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ವಿದ್ಯಾರ್ಥಿನಿಯನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಆಕ್ರೋಶಗೊಂಡ ಪುಂಡರ ಗುಂಪು ಮನೆಗೆ ನುಗ್ಗಿ ದಾಂಧಲೆ ನಡೆಸಿ, ವಿದ್ಯಾರ್ಥಿನಿ ಮೇಘನಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಮೇಘನಾ ತನ್ನ ತಂಗಿಯೊಂದಿಗೆ ಹೋಗುತ್ತಿದ್ದ ವೇಳೆ ಕೆಲ ಯುವಕರು ಚುಡಾಯಿಸಿದ್ದು, ಇದನ್ನು ಪ್ರಶ್ನಿಸಿ ಒಬ್ಬ ಯುವಕನಿಗೆ ಕಪಾಳಕ್ಕೆ ಹೊಡೆದಿದ್ದಾಳೆ ಎನ್ನಲಾಗಿದೆ. ಇದರಿಂದ ಕೆರಳಿದ ಗುಂಪು ಮೇಘನಾ ಮನೆಗೆ ತೆರಳಿ ಕಲ್ಲು ತೂರಾಟ ನಡೆಸಿ, ದಾಂಧಲೆ ಸೃಷ್ಟಿಸಿ ಆಕೆಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಗಾಯಗೊಂಡ ಮೇಘನಾಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆ ಹಾಗೂ ಬಂಧನಕ್ಕಾಗಿ ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

