Breaking News

ಮಕ್ಕಳ ಮೇಲೆ ಕ್ರೌರ್ಯ ಮೆರೆದಿದ್ದ ಬೇಬಿ ಕೇರ್ ಸೆಂಟರ್ ಬಂದ್ ಮಾಡಿ ಬೀಗ ಜಡಿದ ಪೊಲೀಸರು

ಬೆಂಗಳೂರು: ಬ್ರೂಕ್‌ಫೀಲ್ಡ್‌ನ ಬೇಬಿ ಕೇರ್ ಸೆಂಟರ್‌ನಲ್ಲಿ ಮಕ್ಕಳ ಮೇಲೆ ಸಿಬ್ಬಂದಿ ಕ್ರೌರ್ಯ ಮೆರೆದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕೇಂದ್ರವನ್ನು ಬಂದ್ ಮಾಡಿ ಬೀಗ ಜಡಿದಿದ್ದಾರೆ. ವೈರಲ್ ವಿಡಿಯೊ ಆಧರಿಸಿ ಹೆಚ್‌ಎಎಲ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ಐವರು ಸಿಬ್ಬಂದಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ಸಿಬ್ಬಂದಿ ತಲೆಮರೆಸಿಕೊಂಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ವೈರಲ್ ವಿಡಿಯೊ ಹಳೆಯದಾಗಿದೆ ಎಂದು ತಿಳಿದುಬಂದಿದ್ದು, ಮಕ್ಕಳ ಸಹಾಯವಾಣಿ ಅಧಿಕಾರಿಗಳ ದೂರಿನ ಮೇರೆಗೆ ಮಂಜುಳ, ವಿಜಯಲಕ್ಷ್ಮೀ, ಭವಾನಿ, ಸಿಂಧು ಹಾಗೂ ಬಿಂದು ವಿರುದ್ಧ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *