Breaking News

ರಟ್ಟಿಹಳ್ಳಿಯಲ್ಲಿ ಮೊಟ್ಟೆ ವ್ಯಾಪಾರದ ಜಗಳ ಕೊಲೆಯಲ್ಲಿ ಅಂತ್ಯ, ಮೂವರು ಅರೆಸ್ಟ್!

ಹಾವೇರಿ: ರಟ್ಟಿಹಳ್ಳಿಯಲ್ಲಿ ಮೊಟ್ಟೆ ಖರೀದಿಸುವ ವೇಳೆ ಚಿಲ್ಲರೆ ಹಣದ ವಿಚಾರವಾಗಿ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿ ಅಂಗಡಿ ಮಾಲೀಕ ಶಿವಾಜಿರಾವ್ ಬೈರೋಜಿ (55) ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿ ರಟ್ಟಿಹಳ್ಳಿ ಪೊಲೀಸರು ನಾಲ್ವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದು, ಮೂವರನ್ನು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಮತ್ತೋರ್ವ ಆರೋಪಿಗಾಗಿ ಶೋಧ ಮುಂದುವರಿದಿದೆ. ಘಟನೆಗೆ ಯಾವುದೇ ಕೋಮು ಆಯಾಮವಿಲ್ಲ, ಇದು ಚಿಲ್ಲರೆ ಹಣದ ವಿವಾದದಿಂದ ನಡೆದ ಘಟನೆ ಎಂದು ಎಸ್‌ಪಿ ಯಶೋದಾ ವಂಟಗೋಡಿ ಸ್ಪಷ್ಟಪಡಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ಅಂತಿಮ ವರದಿ ಬಳಿಕ ಸಾವಿನ ನಿಖರ ಕಾರಣ ತಿಳಿಯಲಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *