ಬೆಂಗಳೂರು: ದಕ್ಷಿಣ ತಾಲೂಕಿನ ಮಾದಪಟ್ಟಣ ಸಮೀಪದ ಕಲ್ಲು ಕ್ವಾರಿಯಲ್ಲಿ ಬೃಹತ್ ಬಂಡೆ ಕುಸಿದು ಏಳು ಮಂದಿ ಕೂಲಿ ಕಾರ್ಮಿಕರು ಮೃತಪಟ್ಟ ದುರಂತ ಬುಧವಾರ ಬೆಳಗ್ಗೆ ಸಂಭವಿಸಿದೆ. ಮಾದಪಟ್ಟಣದ ಕಾವೇರಿ ಕ್ರಷರ್‌ನಲ್ಲಿ ಬ್ಲಾಸ್ಟಿಂಗ್ ವೇಳೆ ಬಂಡೆ ಕುಸಿದು ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದಾರೆ. ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಜೆಸಿಬಿ ಮೂಲಕ ಬಂಡೆ ತೆರವು ಕಾರ್ಯ ಮುಂದುವರಿದಿದೆ. ಘಟನೆ ಸಂಬಂಧ ತಾವರೆಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮೃತರು ನೆರೆಯ ರಾಜ್ಯಗಳ ಕೂಲಿ ಕಾರ್ಮಿಕರು ಎಂದು ತಿಳಿದುಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

