ತುಮಕೂರು: ಡ್ರಗ್ಸ್ ಚಟಕ್ಕಾಗಿ ದೇವಸ್ಥಾನಗಳಲ್ಲಿ ಕಳ್ಳತನ ಮಾಡುತ್ತಿದ್ದ ಆರು ಮಂದಿಯ ಗ್ಯಾಂಗ್ ಅನ್ನು ತುರುವೆಕೆರೆ ಪೊಲೀಸರು ಬಂಧಿಸಿದ್ದು, 14 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ಕಳವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರು ಹಾಸನ ಮತ್ತು ಮಂಡ್ಯ ಮೂಲದವರಾಗಿದ್ದು, ತುಮಕೂರು ಜಿಲ್ಲೆಯ 22 ದೇವಸ್ಥಾನಗಳಲ್ಲಿ ಕಳ್ಳತನ ನಡೆಸಿರುವುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ. ಹುಂಡಿ ಹಣದ ಜೊತೆಗೆ ದೇವಿಯ ಮೂರ್ತಿಗಳ ಚಿನ್ನದ ತಾಳಿಗಳನ್ನೂ ಕಳವು ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮತ್ತೊಂದು ಕಳ್ಳತನಕ್ಕೆ ಸಂಚು ರೂಪಿಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

