Breaking News

ಅಪ್ರಾಪ್ತನಿಂದ ಲೈಂಗಿಕ ದೌರ್ಜನ್ಯ: ಗರ್ಭಿಣಿಯಾದ ಅಪ್ರಾಪ್ತ ಬಾಲಕಿ

ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ 15 ವರ್ಷದ ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕನ ಪ್ರೀತಿಯ ಮಾತು ನಂಬಿದ ಬಾಲಕಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದು, ಇದೀಗ 9 ತಿಂಗಳ ಗರ್ಭಿಣಿಯಾಗಿದ್ದಾಳೆ. ಹೊಟ್ಟೆ ಬಂದಿರುವ ಬಗ್ಗೆ ಆಸ್ಪತ್ರೆಗೆ ತಿಳಿಸಿದಾಗ ಪ್ರಕರಣ ಬಹಿರಂಗವಾಗಿದೆ. ಬಾಲಕಿ 8ನೇ ತರಗತಿಯವರೆಗೆ ಓದಿ ಶಾಲೆ ಬಿಟ್ಟಿದ್ದಾಳೆ. ತಾಯಿ ಅನಾರೋಗ್ಯದಿಂದ ಮೃತಪಟ್ಟಿದ್ದು, ತಂದೆ ಹಲವು ವರ್ಷಗಳ ಹಿಂದೆ ಮನೆ ತೊರೆದಿದ್ದಾರೆ. ಅಜ್ಜಿಯ ಆರೈಕೆಯಲ್ಲಿ ಇದ್ದ ಬಾಲಕಿಗೆ ಸಂಬಂಧಿಕರ ಮನೆಗೆ ಬರುತ್ತಿದ್ದ ಅಪ್ರಾಪ್ತ ಬಾಲಕ ಪರಿಚಯ ಬೆಳೆಸಿ ಲೈಂಗಿಕ ಸಂಪರ್ಕ ಬೆಳೆಸಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಅಪ್ರಾಪ್ತ ಬಾಲಕನ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕಿ ಹೇಮಾವತಿ ಟಿ., ಆರೋಪಿಯ ಕುಟುಂಬ ರಾಜಕೀಯ ಪ್ರಭಾವ ಬಳಸಿ ಪ್ರಕರಣವನ್ನು ದುರ್ಬಲಗೊಳಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದರು. ಬಾಲಕಿಗೆ ರಕ್ಷಣೆ, ನಿಷ್ಪಕ್ಷಪಾತ ತನಿಖೆ ಹಾಗೂ ನ್ಯಾಯ ಒದಗಿಸಬೇಕು ಎಂದು ಅವರು ಆಗ್ರಹಿಸಿದರು.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *