Breaking News

ವಿದ್ಯಾರ್ಥಿಯ ಅಪಹರಣ, ಇಬ್ಬರು ಯುವಕರ ಬಂಧನ

ಉಡುಪಿ: ಬ್ರಹ್ಮಾವರದಲ್ಲಿ 9ನೇ ತರಗತಿ ವಿದ್ಯಾರ್ಥಿಯನ್ನು ಅಪಹರಿಸಿ ಕೇರಳಕ್ಕೆ ಕರೆದೊಯ್ದು ಬಲವಂತವಾಗಿ ಕೆಲಸ ಮಾಡಿಸಿದ್ದ ಪ್ರಕರಣದಲ್ಲಿ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಬಾಲಕನನ್ನು ಬಾಲ ನ್ಯಾಯ ಮಂಡಳಿ ಮುಂದೆ ಹಾಜರುಪಡಿಸಲಾಗಿದೆ. ಜೂನ್ 1ರಂದು ವಿದ್ಯಾರ್ಥಿಯನ್ನು ಬ್ರಹ್ಮಾವರ ಬಸ್ ನಿಲ್ದಾಣದಿಂದ ಅಪಹರಿಸಿ ಕೇರಳದ ವುಡ್ ಕಂಪನಿಗೆ ಕರೆದೊಯ್ದು ಕೆಲಸಕ್ಕೆ ಸೇರಿಸಿದ್ದರು. ಮನೆಗೆ ಹೋಗುವುದಾಗಿ ಹೇಳಿದ ಬಾಲಕನ ಮೇಲೆ ಹಲ್ಲೆ ನಡೆಸಿ, ಚೂರಿ ತೋರಿಸಿ ಜೀವ ಬೆದರಿಕೆ ಹಾಕಿರುವ ಆರೋಪವೂ ಕೇಳಿಬಂದಿದೆ. ಬಾಲಕ ನಾಪತ್ತೆಯಾಗಿದ್ದ ಕುರಿತು ತಂದೆ ನೀಡಿದ ದೂರಿನ ಮೇರೆಗೆ ತನಿಖೆ ನಡೆಸಿದ ಬ್ರಹ್ಮಾವರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಪ್ರಕರಣದ ಮುಂದಿನ ತನಿಖೆ ಮುಂದುವರಿದಿದೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *