ಉಡುಪಿ ಜಿಲ್ಲೆಯ ಶಿರ್ವ ವ್ಯಾಪ್ತಿಯ ಪೆಟ್ರೋಲ್ ಬಂಕ್‌ನಲ್ಲಿ ₹4,711 ಮೌಲ್ಯದ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಮಹಮ್ಮದ್ ರಿಯಾಜ್, ಮಹಮ್ಮದ್ ಅಫ್ರಾಜ್ ಹಾಗೂ ಆಶಿಲ್ ಬಂಧಿತರು. ಯುಪಿಐ ಮೂಲಕ ಹಣ ಪಾವತಿಸುವ ನಾಟಕವಾಡಿ, ಬಿಲ್ ತರಲು ಸಿಬ್ಬಂದಿ ಒಳಗೆ ಹೋದ ವೇಳೆ ಆರೋಪಿಗಳು ಕಾರಿನೊಂದಿಗೆ ಪರಾರಿಯಾಗಿದ್ದರು. ತನಿಖೆ ನಡೆಸಿದ ಶಿರ್ವ ಪೊಲೀಸರು ಆರೋಪಿಗಳನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

