ಬೆಂಗಳೂರು: ನ್ಯಾಯಾಲಯದ ಆದೇಶದಂತೆ ಬಿಡುಗಡೆ ಮಾಡಬೇಕಿದ್ದ ₹13.90 ಲಕ್ಷ ಹಣಕ್ಕಾಗಿ ₹16 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಅಕೌಂಟೆಂಟ್ ಜನರಲ್ ಕಚೇರಿಯ ಅಕೌಂಟೆಂಟ್ ಆದರ್ಶ್ ಕುಮಾರ್ ಸಿಂಗ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದೂರುದಾರ ಎನ್. ರಮೇಶ್ ನೀಡಿದ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಕಚೇರಿಯಲ್ಲೇ ₹13 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಅಧಿಕಾರಿಯನ್ನು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಲಂಚದ ಹಣವನ್ನು ವಶಪಡಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ.
Check Also
ದೇರಳಕಟ್ಟೆ: ಮೆಡಿಕಲ್ ಕಾಲೇಜಿನಲ್ಲಿ Ragging ಪ್ರಕರಣ ದಾಖಲು
ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …
bigtvnews | Hubli Dharwad News | Kannada News | Karnataka News Hubli News | News In Hubli | Local news

