Breaking News

ಎಸ್‌ಐಆರ್‌ | ಸೈಬರ್ ಕೇಂದ್ರಗಳಲ್ಲಿ ವಂಚನೆ: ನಕಲಿ ಪ್ರಮಾಣಪತ್ರ ಜೋರು

ಹುಬ್ಬಳ್ಳಿ: ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ನಕಲಿ ಜನನ ಪ್ರಮಾಣ ಪತ್ರ ಹಾಗೂ ಇತರೆ ದಾಖಲೆಗಳನ್ನು ಸೃಷ್ಟಿಸಿ ಸಾವಿರಾರು ರೂಪಾಯಿ ವಸೂಲಿ ಮಾಡುವ ಜಾಲ ಸಕ್ರಿಯವಾಗಿದೆ ಎಂಬ ಆರೋಪ ಕೇಳಿಬಂದಿದೆ. ಕೆಲ ಸೈಬರ್ ಕೇಂದ್ರಗಳು ಅಮಾಯಕರಿಗೆ ನಕಲಿ ದಾಖಲೆಗಳನ್ನು ನೀಡಿ ವಂಚಿಸುತ್ತಿರುವ ಮಾಹಿತಿ ಲಭ್ಯವಾಗಿದೆ. ಎಸ್‌ಐಆರ್‌ಗೆ ಸಲ್ಲಿಸುವ ಪ್ರತಿಯೊಂದು ದಾಖಲೆಯನ್ನೂ ಪರಿಶೀಲಿಸಲಾಗುವುದು. ನಕಲಿ ದಾಖಲೆ ಸೃಷ್ಟಿಸಿದವರು ಹಾಗೂ ಬಳಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದು, ಸೇವಾಸಿಂಧು ಅಥವಾ ಅಧಿಕೃತ ಕಚೇರಿಗಳ ಮೂಲಕವೇ ದಾಖಲೆ ಪಡೆಯುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಇನ್ನೊಂದೆಡೆ, ಬೆಳಗಾವಿಯಲ್ಲಿ ಎಸ್‌ಐಆರ್‌ ಗಣತಿ ನಮೂನೆ ಮರಾಠಿಯಲ್ಲೂ ನೀಡಬೇಕು ಎಂದು ಎಂಇಎಸ್‌ ಮುಖಂಡರು ಆಗ್ರಹಿಸಿದ್ದಾರೆ. ಈ ಬೇಡಿಕೆಯನ್ನು ಚುನಾವಣಾ ಆಯೋಗದ ಗಮನಕ್ಕೆ ತರಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *