ಕಲಬುರಗಿ: ರಾಜ್ಯದ ಗೃಹ ಸಚಿವ ಅವರ ತವರು ಜಿಲ್ಲೆಯಾದ ಯಲ್ಲಿ ಪೊಲೀಸರ ಭಾರಿ ನಿರ್ಲಕ್ಷ್ಯ ಬೆಳಕಿಗೆ ಬಂದಿದ್ದು, ಠಾಣೆಯಲ್ಲೇ ಪೋಕ್ಸೊ ಪ್ರಕರಣದ ಆರೋಪಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿರುವ ಘಟನೆ ತೀವ್ರ ಚರ್ಚೆಗೆ ಗ್ರಾಸವಾಗಿದೆ…
ಜಿಲ್ಲೆಯ ಅಫಜಲಪುರ ಪೊಲೀಸ್ ಠಾಣೆಯಲ್ಲಿ ನಡೆದ ಈ ಘಟನೆಯಲ್ಲಿ, 24 ವರ್ಷದ ಮಂಜುನಾಥ್ ಎಂಬಾತ ಪರಾರಿಯಾಗಿದ್ದಾನೆ. ಅಪ್ರಾಪ್ತ ಬಾಲಕಿಯ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಕ್ಸೊ ಕಾಯ್ದೆಯಡಿ ಬಂಧಿತನಾಗಿದ್ದ ಈತನನ್ನು ಪೊಲೀಸರು ವಿಚಾರಣೆಗೆ ಠಾಣೆಗೆ ಕರೆತಂದಿದ್ದರು…
ಜುಲೈ 2ರ ನಸುಕಿನ ಜಾವ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಆಯಾಸದಿಂದ ನಿದ್ರೆಗೆ ಜಾರಿದ ವೇಳೆ, ಅದನ್ನೇ ಅವಕಾಶವನ್ನಾಗಿ ಮಾಡಿಕೊಂಡ ಆರೋಪಿ ಮಂಜುನಾಥ್ ತನ್ನ ಕೈಕೋಳವನ್ನು ಚಾಣಾಕ್ಷತನದಿಂದ ಬಿಚ್ಚಿಕೊಂಡಿದ್ದಾನೆ…
ಬಳಿಕ ಯಾರ ಗಮನಕ್ಕೂ ಬಾರದಂತೆ ಠಾಣೆಯ ಆವರಣದಲ್ಲಿದ್ದ ಮರದ ಕೊಂಬೆಯನ್ನು ಹತ್ತಿ ಕಾಂಪೌಂಡ್ ದಾಟಿ ಪರಾರಿಯಾಗಿದ್ದಾನೆ. ಈ ಸಂಪೂರ್ಣ ದೃಶ್ಯ ಠಾಣೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ…
ಪೊಲೀಸ್ ಠಾಣೆಯ ಒಳಗಿನಿಂದಲೇ ಪೋಕ್ಸೊ ಆರೋಪಿ ತಪ್ಪಿಸಿಕೊಂಡಿರುವುದು ಪೊಲೀಸ್ ಇಲಾಖೆಗೆ ಭಾರೀ ಮುಜುಗರ ಉಂಟುಮಾಡಿದೆ. ಕರ್ತವ್ಯದಲ್ಲಿದ್ದ ಸಿಬ್ಬಂದಿಯ ಬೇಜವಾಬ್ದಾರಿತನದ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ…
ಘಟನೆ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕರ್ತವ್ಯ ಲೋಪ ಎಸಗಿದ ಸಿಬ್ಬಂದಿ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಲಾಗಿದ್ದು, ಪರಾರಿಯಾಗಿರುವ ಆರೋಪಿ ಬಂಧನಕ್ಕಾಗಿ ವಿಶೇಷ ಪೊಲೀಸ್ ತಂಡಗಳನ್ನು ರಚಿಸಿ ತೀವ್ರ ಶೋಧ ಕಾರ್ಯ ಮುಂದುವರಿಸಲಾಗಿದೆ…
bigtvnews | Hubli Dharwad News | Kannada News | Karnataka News Hubli News | News In Hubli | Local news

