ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಚಿಕ್ಕಬಿದರಿ ಗ್ರಾಮದಲ್ಲಿ ಪತ್ನಿಯೇ ಪತಿಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಘಟನೆ ನಡೆದಿದೆ. ಮೃತನನ್ನು ಶಿವಪ್ಪ ಎಂದು ಗುರುತಿಸಲಾಗಿದ್ದು, ಪ್ರಕರಣದಲ್ಲಿ ಪತ್ನಿ ಸಾವಿತ್ರಾ ಹಾಗೂ ಮಗ ಹನುಮೇಗೌಡರನ್ನು ಪೊಲೀಸರು ಬಂಧಿಸಿದ್ದಾರೆ. ಶಿವಪ್ಪ ಪ್ರತಿದಿನ ಮದ್ಯಪಾನ ಮಾಡಿ ಮನೆಗೆ ಬಂದು ಗಲಾಟೆ ಮಾಡುತ್ತಿದ್ದನೆಂದು ಆರೋಪಿಸಲಾಗಿದೆ. ಇದರಿಂದ ಬೇಸತ್ತಿದ್ದ ಸಾವಿತ್ರಾ, ಕಲ್ಲಿನಿಂದ ತಲೆಗೆ ಹೊಡೆದು ಪತಿಯನ್ನು ಕೊಲೆ ಮಾಡಿದ್ದಾಳೆ ಎನ್ನಲಾಗಿದೆ. ಬಳಿಕ ಶವವನ್ನು ಬೇರೆಡೆಗೆ ಸಾಗಿಸಲು ಮಗ ಹನುಮೇಗೌಡ ತಾಯಿಗೆ ಸಹಾಯ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಕುರಿತು ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳ ಪರಿಶೀಲನೆ ನಡೆಸಿದ ಪೊಲೀಸರು ತಾಯಿ-ಮಗ ಇಬ್ಬರನ್ನೂ ಬಂಧಿಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

