ಮಂಡ್ಯ: ಬೆಂಗಳೂರು–ಮೈಸೂರು ಹಳೆಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಗೂಡ್ಸ್ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಏಳು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಕಾರು, ಏರ್ ಪಿಸ್ತೂಲ್ ಹಾಗೂ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರ ಪ್ರಕಾರ, ರೆಸಾರ್ಟ್‌ನಲ್ಲಿ ಹುಟ್ಟುಹಬ್ಬದ ಪಾರ್ಟಿ ಮುಗಿಸಿ ಮದ್ಯದ ಅಮಲಿನಲ್ಲಿ ಬರುತ್ತಿದ್ದ ವೇಳೆ, ಗೂಡ್ಸ್ ವಾಹನ ಚಾಲಕ ಕಾರಿಗೆ ಜಾಗ ಬಿಡದ ಹಿನ್ನೆಲೆಯಲ್ಲಿ ಆರೋಪಿಗಳು ವಾಹನವನ್ನು ಬೆನ್ನಟ್ಟಿ ಗುಂಡು ಹಾರಿಸಿದ್ದಾರೆ. ವಶಪಡಿಸಿಕೊಂಡಿರುವ ಆಯುಧ ಏರ್ ಗನ್ ಅಥವಾ ಫೈರ್ ಗನ್ ಎಂಬುದು ಎಫ್‌ಎಸ್‌ಎಲ್ ವರದಿ ಬಳಿಕ ಸ್ಪಷ್ಟವಾಗಲಿದೆ. ಇನ್ನೊಂದೆಡೆ, ಘಟನೆ ಕುರಿತು ಹಲವು ಅನುಮಾನಗಳು ವ್ಯಕ್ತವಾಗಿದ್ದು, ನಸುಕಿನ ವೇಳೆ ಆರೋಪಿಗಳ ಸಂಚಾರ, ಗುಂಡಿನ ದಾಳಿಯ ನಿಜವಾದ ಕಾರಣ ಹಾಗೂ ಪ್ರಕರಣದ ತನಿಖೆಯನ್ನು ಪಾರದರ್ಶಕವಾಗಿ ನಡೆಸಬೇಕು ಎಂದು ಸಾರ್ವಜನಿಕರು ಮತ್ತು ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

