Breaking News

ಮಂಗಳೂರು ಜೈಲ್‌ನಲ್ಲಿ ಗಾಂಜಾ ಮಾರಾಟ ಯತ್ನ: ವ್ಯಕ್ತಿ ವಶಕ್ಕೆ

ಮಂಗಳೂರು: ನಗರ ಮಧ್ಯದಲ್ಲಿರುವ ಜಿಲ್ಲಾ ನ್ಯಾಯಾಲಯದ ಕೈದಿಗಳಿಗೆ ಗಾಂಜಾ ಸರಬರಾಜು ಮಾಡಲು ಪ್ರಯತ್ನಿಸಿದ ವ್ಯಕ್ತಿಯನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (ಕೆಎಸ್‌ಐಎಸ್‌ಎಫ್‌) ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ. ತಿಲಕ್‌ರಾಜ್ ಎಂಬಾತ ಜೈಲು ಆವರಣದ ಹೊರಗೆ ನಿಂತು ಯಾವುದೋ ವಸ್ತುವನ್ನು ಒಳಗೆ ಎಸೆಯುತ್ತಿದ್ದುದನ್ನು ಗಮನಿಸಿದ ಸಿಬ್ಬಂದಿ ಆತನನ್ನು ಹಿಡಿಯಲು ಹೋಗಿದ್ದಾರೆ. ಆಗ ಓಡಿದ ಆತನನ್ನು ಸುಮಾರು ಅರ್ಧ ಕಿಲೊಮೀಟರ್ ದೂರದ ವರೆಗೆ ಅಟ್ಟಾಡಿಸಿ ಹಿಡಿಯಲಾಗಿದೆ ಎಂದು ಪೊಲೀಸರು ತಿಳಿಸದ್ದಾರೆ. ವಿಚಾರಣಾಧೀನ ಕೈದಿ ಲಾಯ್ ಎಂಬಾತನಿಗಾಗಿ ಗಾಂಜಾ ಸರಬರಾಜು ಮಾಡಲಾಗಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದ್ದು 35 ಗ್ರಾಂ ಮಾದಕ ಪದಾರ್ಥ ಮತ್ತು ಎರಡು ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ತಿಲಕ್ ರಾಜ್ ಮತ್ತು ಲಾಯ್‌ ವಿರುದ್ಧ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *