ಬೆಂಗಳೂರುದಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ ಪ್ರಕರಣವನ್ನು ಪೊಲೀಸರು 24 ಗಂಟೆಗಳಲ್ಲೇ ಭೇದಿಸಿ, ಉತ್ತರ ಪ್ರದೇಶದ ಗಾಜಿಯಾಬಾದ್ ಮೂಲದ ನಿಶಾಂತ್ ತ್ಯಾಗಿ (36) ಎಂಬಾತನನ್ನು ಬಂಧಿಸಿದ್ದಾರೆ. ಸಂಜಯನಗರ ಠಾಣೆ ಪೊಲೀಸರು ತಾಂತ್ರಿಕ ವಿಶ್ಲೇಷಣೆಯ ಮೂಲಕ ಇ-ಮೇಲ್ ಉತ್ತರ ಪ್ರದೇಶದಿಂದ ಕಳುಹಿಸಿರುವುದನ್ನು ಪತ್ತೆಹಚ್ಚಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಆರೋಪಿಯ ಮೊಬೈಲ್ ಪರಿಶೀಲನೆ ವೇಳೆ ಆತನೇ ಬೆದರಿಕೆ ಇ-ಮೇಲ್ ಕಳುಹಿಸಿದ್ದಾನೆ ಎಂಬುದು ದೃಢಪಟ್ಟಿದೆ. ಪ್ರಾಥಮಿಕ ವಿಚಾರಣೆಯಲ್ಲಿ ಆರೋಪಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

