Breaking News

ಪೋಕ್ಸೊ ಆರೋಪಿ ಠಾಣೆಯಿಂದ ಎಸ್ಕೇಪ್ ಪ್ರಕರಣ, ಮೂವರು ಸಿಬ್ಬಂದಿ ಅಮಾನತು

ಠಾಣೆಯಿಂದ ಪೋಕ್ಸೊ ಆರೋಪಿ ಎಸ್ಕೇಪ್: ನಿರ್ಲಕ್ಷ್ಯಕ್ಕೆ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್..!

ಪೊಲೀಸರ ನಿದ್ರೆಗೆ ಆರೋಪಿ ಪರಾರಿ: ಕಲಬುರಗಿಯಲ್ಲಿ ಮೂವರಿಗೆ ಅಮಾನತು ಶಿಕ್ಷೆ..!

ಕಲಬುರಗಿ ಜಿಲ್ಲೆಯ ಅಫಜಲಪುರ ಪೊಲೀಸ್ ಠಾಣೆಯಿಂದ ಪೋಕ್ಸೊ ಪ್ರಕರಣದ ಆರೋಪಿ ಪರಾರಿಯಾದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಆರೋಪದಡಿ ಮೂವರು ಪೊಲೀಸ್ ಸಿಬ್ಬಂದಿಯನ್ನು ತಕ್ಷಣದಿಂದ ಅಮಾನತುಗೊಳಿಸಲಾಗಿದೆ. ಈ ಆದೇಶವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಹೊರಡಿಸಿದ್ದಾರೆ. ಅಮಾನತುಗೊಂಡವರಲ್ಲಿ ಅಂದಿನ ಠಾಣಾಧಿಕಾರಿ ರವಿ, ಸೆಂಟ್ರಿ ಪ್ರಶಾಂತ್ ಹಾಗೂ ಸಿಬ್ಬಂದಿ ಶಿವಣ್ಣ ಸೇರಿದ್ದಾರೆ. ಆರೋಪಿಗೆ ಸೂಕ್ತ ಭದ್ರತೆ ಒದಗಿಸುವಲ್ಲಿ ವಿಫಲರಾಗಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಎಸ್‌ಪಿ, ಠಾಣೆಯ ಉಪನಿರೀಕ್ಷಕ ಹಾಗೂ ವೃತ್ತ ನಿರೀಕ್ಷಕರಿಗೂ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ. ಆರೋಪಿ ಪರಾರಿಯಾದ ಘಟನೆ ಕುರಿತು ಇಲಾಖಾ ತನಿಖೆ ಮುಂದುವರಿದಿದೆ.

Share News

About BigTv News

Check Also

ಕೊಲ್ಲೂರಿನಲ್ಲಿ 80 ಸಾವಿರ ರೂ. ಕಳವು: 24 ಗಂಟೆಯೊಳಗೆ ಮೂವರು ಕಳ್ಳಿಯರ ಬಂಧನ

ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯ ವ್ಯಾನಿಟಿ ಬ್ಯಾಗ್‌ನಿಂದ ₹80 ಸಾವಿರ ನಗದು ಕಳವು ಮಾಡಿದ ಪ್ರಕರಣವನ್ನು ಕೊಲ್ಲೂರು …

Leave a Reply

Your email address will not be published. Required fields are marked *