Breaking News

*ಸಿಸಿಬಿ ಪೊಲೀಸರ ಕಾರ್ಯಾಚರಣೆ: ಹೆರಾಯಿನ್ ಸಾಗಿಸುತ್ತಿದ್ದ ಇಬ್ಬರ ಬಂಧನ*

ಬೆಳಗಾವಿಯ ಸಿಸಿಬಿ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿ ಹೆರಾಯಿನ್ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬೆಳಗಾವಿ ನಗರದ ಕಂಗ್ರಾಳಿ ಕೆ ಹೆಚ್ ಗ್ರಾಮದ ಗಜಾನನ ಪಾಟೀಲ್ ಹಾಗೂ ರಾಮದೇವ ಗಲ್ಲಿಯ ವಿನಾಯಕ ಖಂಡಾಳೆ ಬಂಧಿತರು ಎಂದು ಗುರುತಿಸಲಾಗಿದೆ. ಆರೋಪಿಗಳಿಬ್ಬರು ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ಹಣ್ಣಿನ ಮಾರುಕಟ್ಟೆಯ ಕಾಂಪ್ಲೇಕ್ಸ್ ಬಳಿ ಹೆರಾಯಿನ್ ಸಾಗಾಟ ಮಾಡುತ್ತಿದ್ದ ಸಮಯದಲ್ಲಿ ಸಿಸಿಬಿ ವಿಭಾಗದ ಪಿಐ ಮಂಜುನಾಥ ನಾಯಿಕ ಅವರ ತಂಡ ಮಂಜುನಾಥ ಭಜಂತ್ರಿ ಹಾಗೂ ಸಿಬ್ಬಂಧಿ ದಾಳಿ ನಡೆಸಿ ಒಟ್ಟು 4,96,000 ರೂ ಮೌಲ್ಯದ 24.80 ಗ್ರಾಂ ಹೆರಾಯಿನ್ ವಶಕ್ಕೆ ಪಡೆದು ಆರೋಪಿಗಳನ್ನು ಜೈಲಿಗಟ್ಟಿದ್ದಾರೆ. ಈ ಕುರಿತು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *