ಮಂಗಳೂರು: ಚಿನ್ನದ ವ್ಯಾಪಾರಿಯನ್ನು ಅಡ್ಡಗಟ್ಟಿ ₹23.10 ಲಕ್ಷ ಮೌಲ್ಯದ ಚಿನ್ನಾಭರಣ ದರೋಡೆ ಮಾಡಿದ ಪ್ರಕರಣದಲ್ಲಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಒಟ್ಟು 16 ಮಂದಿ ಭಾಗಿಯಾಗಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ಮುಂದುವರಿದಿದೆ. ಜೂನ್ 29ರಂದು ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಯಾಪಾರಿ ವಿಕಾಸ್ ಧನವಡೆ ಅವರ ಕಾರನ್ನು ಅಡ್ಡಗಟ್ಟಿದ ಆರೋಪಿಗಳು ತಲವಾರು ತೋರಿಸಿ ಬೆದರಿಸಿ, ಕುಟುಂಬದವರನ್ನು ಅಪಹರಿಸಿ ಕೆಲ ಕಿಲೋಮೀಟರ್ ದೂರದಲ್ಲಿ ಬಿಟ್ಟು 180 ಗ್ರಾಂ ಚಿನ್ನಾಭರಣ, ಕಾರು ಹಾಗೂ ಮೊಬೈಲ್‌ಗಳನ್ನು ದೋಚಿ ಪರಾರಿಯಾಗಿದ್ದರು. ಪ್ರಕರಣದ ತನಿಖೆ ನಡೆಸಿದ ಪಣಂಬೂರು ಪೊಲೀಸರು ಕೇರಳದ ನಿಮಿಲ್ ಆರ್.ಕೆ., ಮಡಿಕೇರಿಯ ಇರ್ಷಾದ್ ಹಾಗೂ ಮುಸ್ತಾಫ ಅವರನ್ನು ಬಂಧಿಸಿದ್ದಾರೆ. ನ್ಯಾಯಾಲಯವು ಮೂವರನ್ನೂ 10 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದು, ಉಳಿದ ಆರೋಪಿಗಳ ಬಂಧನ ಹಾಗೂ ಚಿನ್ನಾಭರಣ ಪತ್ತೆಗೆ ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

