Breaking News

ಮೈಸೂರು| ಪತಿ ಕೊಲೆ; ಪತ್ನಿ ಸೇರಿ ಆರು ಆರೋಪಿಗಳ ಬಂಧನ

ಮೈಸೂರು: ಕುವೆಂಪುನಗರದ ಹುಡ್ಕೋ ಬಡಾವಣೆಯಲ್ಲಿ ನಡೆದ ನಿತ್ಯಾನಂದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಸೇರಿ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ನಿತ್ಯಾನಂದ ಮದ್ಯಪಾನ ಮಾಡಿ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಪತ್ನಿ ಸುಶೀಲ, ಸಂಬಂಧಿಕರೊಂದಿಗೆ ಸೇರಿ ಕೊಲೆ ಸಂಚು ರೂಪಿಸಿದ್ದು, ಜೂನ್ 29ರ ಮಧ್ಯರಾತ್ರಿ ಕತ್ತು ಹಿಸುಕಿ ಹತ್ಯೆ ಮಾಡಿದ್ದರು. ಬಳಿಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ನಂಬಿಸಲು ಯತ್ನಿಸಿದ್ದರು. ಅಂತ್ಯಸಂಸ್ಕಾರದ ವೇಳೆ ಮೃತನ ಕುತ್ತಿಗೆಯಲ್ಲಿದ್ದ ಗಾಯದ ಗುರುತುಗಳನ್ನು ಸಹೋದರ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ತನಿಖೆ ನಡೆಸಿದ ಕುವೆಂಪುನಗರ ಪೊಲೀಸರು ಆರು ಆರೋಪಿಗಳನ್ನು ಬಂಧಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *