ಬೆಂಗಳೂರು: ದಕ್ಷಿಣ ತಾಲೂಕಿನ ಮಾದಪಟ್ಟಣ ಗ್ರಾಮದ ಕಾವೇರಿ ಕ್ವಾರಿಯಲ್ಲಿ ಬೃಹತ್ ಕಲ್ಲುಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಪ್ರಕರಣದಲ್ಲಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸಾಯಿ ರಾಮ್ ಕ್ರಷರ್ ಮಾಲೀಕ ಪಾಂಡುರಂಗ, ಕ್ವಾರಿ ಇನ್‌ಚಾರ್ಜ್ ಲೋಕೇಶ್ ಹಾಗೂ ಸ್ಥಳೀಯ ಇನ್‌ಚಾರ್ಜ್ ರಾಜು ಎಂದು ಗುರುತಿಸಲಾಗಿದೆ. ಕಾರ್ಮಿಕ ಗೋಪಿಕೃಷ್ಣನ್ ನೀಡಿದ ದೂರಿನ ಮೇರೆಗೆ ಭಾರತೀಯ ನ್ಯಾಯ ಸಂಹಿತೆ (BNS) ಅಡಿ ಪ್ರಕರಣ ದಾಖಲಾಗಿತ್ತು. ಘಟನೆಯಲ್ಲಿ ಏಳು ಕಾರ್ಮಿಕರು ಮೃತಪಟ್ಟಿದ್ದು, ಕಾವೇರಿ ಕ್ರಷರ್ ಮಾಲೀಕ ಉದಯ್ ಶಂಕರ್ ಹಾಗೂ ಬಸವೇಶ್ವರ ಕ್ರಷರ್ ಮಾಲೀಕ ಡಿ. ಆನಂದಸ್ವಾಮಿ ಇನ್ನೂ ಬಂಧನವಾಗಿಲ್ಲ. ಪ್ರಕರಣದ ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

