Breaking News

ಬೆಂಗಳೂರು ನಡು ರಸ್ತೆಯಲ್ಲೇ ಹೊತ್ತಿ ಉರಿದ ಸಾರಿಗೆ ಬಸ್: ತಪ್ಪಿದ ಭಾರಿ ದುರಂತ!

ಬೆಂಗಳೂರು: ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಬಳಿ ಚಲಿಸುತ್ತಿದ್ದ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬಸ್‌ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟುಹೋದ ಘಟನೆ ನಡೆದಿದೆ. ಇಂಜಿನ್ ಭಾಗದಲ್ಲಿ ತಾಂತ್ರಿಕ ದೋಷ ಅಥವಾ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಯ ವೇಳೆ ಬಸ್‌ನಲ್ಲಿ ಇಬ್ಬರು ಪ್ರಯಾಣಿಕರು, ಚಾಲಕ ಮತ್ತು ನಿರ್ವಾಹಕರಿದ್ದು, ಚಾಲಕ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದರಿಂದ ಎಲ್ಲರೂ ಯಾವುದೇ ಗಾಯಗಳಿಲ್ಲದೆ ಸುರಕ್ಷಿತವಾಗಿ ಹೊರಬಂದಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಘಟನೆಯಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಬೆಂಕಿ ಅವಘಡದ ನಿಖರ ಕಾರಣವನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *