Breaking News

ನಗರದಲ್ಲಿ ಆಂಧ್ರ ವಿದ್ಯಾರ್ಥಿಯ ಹತ್ಯೆ – ಬೈಕ್ ಸಹಿತ ಜೀವಂತ ದಹನ!

ಆನೇಕಲ್: ಕೆಲಸ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದ ಆಂಧ್ರಪ್ರದೇಶ ಮೂಲದ 25 ವರ್ಷದ ಡಿಪ್ಲೊಮಾ ವಿದ್ಯಾರ್ಥಿ ವಂಶೀ ಕೃಷ್ಣ ಅವರನ್ನು ದುಷ್ಕರ್ಮಿಗಳು ಬೈಕ್ ಸಮೇತ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸರ್ಜಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಉದ್ಯೋಗದ ಭರವಸೆಯೊಂದಿಗೆ ಸ್ನೇಹಿತನ ಕರೆಗೆ ಬೆಂಗಳೂರಿಗೆ ಬಂದಿದ್ದ ವಂಶೀ ಕೃಷ್ಣ, ಸ್ನೇಹಿತನ ಮೊಬೈಲ್ ಸ್ವಿಚ್ ಆಫ್ ಆಗಿದ್ದ ಹಿನ್ನೆಲೆಯಲ್ಲಿ ಮತ್ತೊಬ್ಬ ಸ್ನೇಹಿತನಿಗೆ ಕೊನೆಯ ಬಾರಿ ಕರೆ ಮಾಡಿದ್ದರು. ಬಳಿಕ ಅಜೀಂ ಪ್ರೇಮ್‌ಜೀ ಕಾಲೇಜು ರಸ್ತೆ ಸಮೀಪ ಅವರ ಸುಟ್ಟ ಮೃತದೇಹ ಹಾಗೂ ಬೈಕ್ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು, SOCO ತಜ್ಞರ ತಂಡ ಹಾಗೂ ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸರ್ಜಾಪುರ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿದಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *