ದಾವಣಗೆರೆ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಮಧ್ಯಪ್ರದೇಶದ ಖಂಡ್ವಾ ಜಿಲ್ಲೆಯ ಜೀತ್ ಸಿಂಗ್ ಟಾಂಕ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ ಸುಮಾರು ₹6 ಲಕ್ಷ ಮೌಲ್ಯದ 2 ಕೆ.ಜಿ. 900 ಗ್ರಾಂ ಬೆಳ್ಳಿ ಸಾಮಗ್ರಿ ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ಜಪ್ತಿ ಮಾಡಿದ್ದಾರೆ. ಜೂನ್ 14ರಂದು ಮನೆಯ ಹಿಂಬಾಗಿಲನ್ನು ಕಬ್ಬಿಣದ ಆಯುಧದಿಂದ ಮುರಿದು, ಮಲಗುವ ಕೊಠಡಿಯಲ್ಲಿ ಇಟ್ಟಿದ್ದ ಬೆಳ್ಳಿ ಆಭರಣಗಳನ್ನು ಕಳವು ಮಾಡಲಾಗಿತ್ತು. ಈ ಸಂಬಂಧ ಮನೆಯ ಮಾಲೀಕ ಎಲ್.ಕೆ. ಲಿಂಗರಾಜ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಬಡಾವಣೆ ಪೊಲೀಸ್ ಠಾಣೆಯಲ್ಲಿಯೂ ಮತ್ತೊಂದು ಮನೆಗಳ್ಳತನ ಪ್ರಕರಣ ಪತ್ತೆಯಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

