ತುಮಕೂರು: ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಗೂಳೂರು ಗ್ರಾಮ ಆಡಳಿತಾಧಿಕಾರಿ (VAO) ಭಾವನ (26) ಹಿಟ್ ಆ್ಯಂಡ್ ರನ್ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗೂಳೂರು ಬಳಿ ಅಪರಿಚಿತ ವಾಹನವೊಂದು ಅವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದೆ. ತೀವ್ರ ಗಾಯಗೊಂಡ ಭಾವನ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ತುಮಕೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಾರಿಯಾದ ವಾಹನ ಹಾಗೂ ಚಾಲಕನ ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

