Breaking News

KR Circle ಬಳಿ ಎರಡು ಬಿಎಂಟಿಸಿ ಬಸ್‌ಗಳ ನಡುವೆ ಭೀಕರ ಅಪಘಾತ, ಪ್ರಯಾಣಿಕರ ರಕ್ಷಣೆಗೆ ಹರಸಾಹಸ!

ಬೆಂಗಳೂರು: ಕೆ.ಆರ್. ಸರ್ಕಲ್‌ನಲ್ಲಿ ಸಿಗ್ನಲ್‌ನಲ್ಲಿ ನಿಂತಿದ್ದ ವಾಯು ವಜ್ರ (ವೋಲ್ವೋ) ಬಸ್‌ಗೆ ಹಿಂಬದಿಯಿಂದ ಬಂದ ಸಾಮಾನ್ಯ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಸಾಮಾನ್ಯ ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಚಾಲಕನಿಗೂ ಗಂಭೀರ ಗಾಯಗಳಾಗಿವೆ. ಅಪಘಾತದಲ್ಲಿ ಹಲವು ಪ್ರಯಾಣಿಕರು ಬಸ್‌ನೊಳಗೆ ಸಿಲುಕಿಕೊಂಡಿದ್ದು, ಸ್ಥಳೀಯರು ಮತ್ತು ರಕ್ಷಣಾ ಸಿಬ್ಬಂದಿ ಹರಸಾಹಸಪಟ್ಟು ಅವರನ್ನು ಹೊರತೆಗೆದು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆಯೊಬ್ಬರ ಕಾಲು ಸಿಲುಕಿಕೊಂಡಿದ್ದರಿಂದ ಕಬ್ಬಿಣದ ಭಾಗಗಳನ್ನು ಕತ್ತರಿಸಿ ರಕ್ಷಿಸಲಾಯಿತು. ಘಟನೆಯಿಂದ ಕೆ.ಆರ್. ಸರ್ಕಲ್‌ನಲ್ಲಿ ಕೆಲಕಾಲ ಭಾರೀ ಸಂಚಾರ ದಟ್ಟಣೆ ಉಂಟಾಯಿತು. ಅಪಘಾತಕ್ಕೆ ಬ್ರೇಕ್ ವೈಫಲ್ಯ ಅಥವಾ ಚಾಲಕನ ನಿರ್ಲಕ್ಷ್ಯ ಕಾರಣವೇ ಎಂಬ ಬಗ್ಗೆ ಸಂಚಾರಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *